ಅಪೊಸ್ತಲರ ಕೃತ್ಯಗಳು 11:5 - ದೆವಾಚಿ ಖರಿ ಖಬರ್5 ಪೆದ್ರುನ್ ತೆಂಕಾ, ಮಿಯಾ ಜೊಪ್ಪಾ ಮನ್ತಲ್ಯಾ ಶಾರಾತ್ ಹೊತ್ತ್ಯಾ ತನ್ನಾ, ಮಾಗ್ನಿ ಕರ್ತಾನಾ, ಮಾಕಾ ಎಕ್ ದರ್ಶನ್ ದಿಸ್ಲೆ ತ್ಯಾ ದರ್ಶನಾತ್ ಮಳ್ಬಾಕ್ನಾ ಉತ್ರುನ್ ಯೆತಲೊ ಎಕ್ ವಸ್ತ್ ಬಗ್ಲೊ ತೆ ಫಾಂಡ್ರ್ಯಾ ಕಪ್ಡ್ಯಾಚ್ಯಾ ಝೊಳ್ಗಿ ಸಾರ್ಕೆ ಹೊತ್ತೆ ತೆಚ್ಯಾ ಚಾರಿ ಮುಲ್ಲ್ಯಾಕ್ನಿಬಿ ಬಾಂದುನ್ ಮಳಬಾಕ್ನಾ ಖಾಲ್ತಿ ಸೊಡಲ್ಲೆ ಹೊತ್ತೆ ತೆ ಉತ್ರುನ್ ಯೆವ್ನ್ ಮಿಯಾ ಹೊತ್ಯಾಕ್ಡೆ ಜಗೊಳುಚ್ ಇಬೆ ರಾಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು; ಅದೇನಂದರೆ ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಇಳಿಸಲ್ಪಟ್ಟು ನಾನಿದ್ದಲ್ಲಿಗೆ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದುಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದೆನು. ಆಗ ನಾನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡೆನು. ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಪರಲೋಕದಿಂದ ಕೆಳಗೆ ಇಳಿದು ನಾನಿದ್ದಲ್ಲಿಗೆ ಬರುವುದನ್ನು ಕಂಡೆನು. ಅಧ್ಯಾಯವನ್ನು ನೋಡಿ |