ಅಪೊಸ್ತಲರ ಕೃತ್ಯಗಳು 12:23 - ದೆವಾಚಿ ಖರಿ ಖಬರ್23 ಹೆರೊದಾನ್ ಹಿ ಹೊಗ್ಳಾಪಾ ಸಗ್ಳಿ ಅಪ್ನಾಚಿಚ್ ಕರುನ್ ಘೆಟ್ಲ್ಯಾನ್, ತೆನಿ ದೆವಾಕ್ ಮಹಿಮಾ ಕರುಕ್ ನಾ ತಸೆ ಹೊವ್ನ್ ತನ್ನಾಚ್ ಧನಿಯಾಚ್ಯಾ ದೆವ್ ದುತಾನ್ ತೆಕಾ ರೊಗ್ ಯೆಯ್ ಸಾರ್ಕೆ ಕರ್‍ಲ್ಯಾನ್, ಅನಿ ತೆಚ್ಯಾ ಅಂಗಾತ್ಲಿ ಭುತ್ತುರ್‍ಲಿ ಭಾಗಾ ಕಿಡ್ಯಾನಿ ಖಾವ್ನ್ ತೊ ಮರುನ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು. ಅಧ್ಯಾಯವನ್ನು ನೋಡಿ |