ಅಪೊಸ್ತಲರ ಕೃತ್ಯಗಳು 16:10 - ದೆವಾಚಿ ಖರಿ ಖಬರ್10 ಪಾವ್ಲುನ್ ತೆ ದರ್ಶನ್ ಬಗಲ್ಯಾ ತನ್ನಾ ಥೈತ್ಲ್ಯಾ ಲೊಕಾಕ್ನಿ ಬರಿ ಖಬರ್ ಕಳ್ವುಕ್ ಸಾಟ್ನಿ ದೆವಾನ್ ಅಮ್ಕಾ ಬಲ್ವುಲಾ ಮನುನ್ ಅರ್ಥ್ ಕರುನ್ ಘೆವ್ನ್ ಮೆಸೆದೊನಿಯಾಕ್ ಜಾವ್ಕ್ ಅಮಿ ತಯಾರ್ ಹೊತ್ತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನಿಗೆ ಆ ದರ್ಶನವಾದ ಮೇಲೆ ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು ಕೂಡಲೆ ಮಕೆದೋನ್ಯಕ್ಕೆ ಹೊರಟು ಹೋಗುವ ಪ್ರಯತ್ನಮಾಡಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪೌಲನು ಆ ದರ್ಶನವನ್ನು ಕಂಡಕೂಡಲೇ, ಅಲ್ಲಿಯ ಜನರಿಗೆ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ದೇವರು ನಮ್ಮನ್ನು ಕರೆದಿದ್ದಾನೆಂದು ಅರ್ಥಮಾಡಿಕೊಂಡು ಮಕೆದೋನಿಯಕ್ಕೆ ಹೋಗಲು ನಾವು ಸಿದ್ಧರಾದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು. ಅಧ್ಯಾಯವನ್ನು ನೋಡಿ |