ಅಪೊಸ್ತಲರ ಕೃತ್ಯಗಳು 16:15 - ದೆವಾಚಿ ಖರಿ ಖಬರ್15 ಲಿಡಿಯಾ ಅನಿ ತೆಚ್ಯಾ ಘರಾತ್ ಹೊತ್ತ್ಯಾ ಸಗ್ಳ್ಯಾ ಲೊಕಾನಿಬಿ ಬಾಲ್ತಿಮ್ ಘೆಟ್ಲ್ಯಾನಿ, ಅನಿ ತೆನಿ ಮಿಯಾ ಧನಿಯಾ ಜೆಜುಚ್ಯಾ ವರ್‍ತಿ ಖರೊ ವಿಶ್ವಾಸ್ ಥವಲ್ಲಿ ಮನುನ್ ತುಮಿ ಯೆವಜ್ತ್ಯಾಸಿ ಹೊಲ್ಯಾರ್ ಮಾಜ್ಯಾ ಘರಾಕ್ ಯೆವ್ನ್ ರ್‍ಹಾವಾ ಮನುನ್ ಒತ್ತಾಯ್ ಕರ್‍ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು. ಅಧ್ಯಾಯವನ್ನು ನೋಡಿ |