ಅಪೊಸ್ತಲರ ಕೃತ್ಯಗಳು 16:26 - ದೆವಾಚಿ ಖರಿ ಖಬರ್26 ಬಗುನ್ಗೆತ್ ರ್‍ಹಾತಾನಾಚ್ ಮೊಟೊ ಭುಕಂಪ್ ಹೊಲೊ, ತೊ ಭುಕಂಪ್ ಲೈ ಮೊಟೊ ಹೊಲ್ಲ್ಯಾ ಸಾಟ್ನಿ ಬಂಧಿಖಾನ್ಯಾಚಿ ಪಾಯಾ ಸಗ್ಳಿ ಹಾಲ್ಲಿ, ಅನಿ ದಾರಾ ಸಗ್ಳಿ ಉಗ್ಡುನ್ ಸಗ್ಳಿ ಚೊರಾಂಚಿ ಬಾಂಧಲಿ ಸರ್ಪಳಿಯಾ ಸುಟುನ್ ಪಡ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು. ಅಧ್ಯಾಯವನ್ನು ನೋಡಿ |