ಅಪೊಸ್ತಲರ ಕೃತ್ಯಗಳು 16:27 - ದೆವಾಚಿ ಖರಿ ಖಬರ್27 ತನ್ನಾ ಬಂದಿಖಾನ್ಯಾಚೊ ಅಧಿಕಾರಿ ನಿಜೆತ್ನಾ ಜಾಗೊ ಹೊಲೊ, ದಾರಾ ಸಗ್ಳಿ ಉಗಡಲ್ಲಿ ಹೊತ್ತಿ ಬಗುನ್ ಅತ್ತಾ ಸಗ್ಳಿ ಚೊರಾಬಿ ಚುಕ್ವುನ್ ಘೆವ್ನ್ ಪಳುನ್ ಜಾವ್ಕ್ ಫಿರೆ ಮನುನ್ ಚಿಂತುನ್, ತೆನಿ ಅಪ್ಲೊ ಕೊಯ್ತೊ ಘೆವ್ನ್ ಜಿವ್ ಕಾಡುನ್ ಘೆವ್ಚೆ ಮನುನ್ ಹೊತ್ತ್ಯಾ ತನ್ನಾಚ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳಬೇಕೆಂದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಸೆರೆಮನೆಯ ಅಧಿಕಾರಿ ಎಚ್ಚತ್ತುಕೊಂಡು, ಸೆರೆಮನೆಯ ಬಾಗಿಲುಗಳು ತೆರೆದಿರುವುದನ್ನು ಕಂಡು, ಸೆರೆಯಾಳುಗಳು ತಪ್ಪಿಸಿಕೊಂಡು ಹೋಗಿರಬಹುದೆಂದು ಭಾವಿಸಿ, ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು. ಅಧ್ಯಾಯವನ್ನು ನೋಡಿ |