ಅಪೊಸ್ತಲರ ಕೃತ್ಯಗಳು 17:24 - ದೆವಾಚಿ ಖರಿ ಖಬರ್24 ಸಗ್ಳೆ ಜಗ್ ಅನಿ ತ್ಯಾತುರ್ ಹೊತ್ತೆ ಹರ್ ಎಕ್‍ಬಿ ರಚಲ್ಲೊ ತ್ಯಾ ದೆವಾನುಚ್ ಮಳ್ಬಾಕ್ ಅನಿ ಜಿಮ್ನಿಕ್ ತೊಚ್ ವಡಿಲ್ ಮಾನ್ಸಾನಿ ರಚಲ್ಲ್ಯಾ ಹ್ಯಾ ಗುಡಿಯಾತ್ನಿ ತೊ ಜಿವನ್ ಕರಿನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಜಗತ್ತನ್ನೂ ಅದರಲ್ಲಿರುವ ಎಲ್ಲಾ ವಸ್ತುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಜಗತ್ತನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಲೋಕಗಳ ಅಧಿಪತಿಯಾಗಿದ್ದಾರೆ. ಅವರು ಕೈಗಳಿಂದ ಕಟ್ಟಿದ ದೇವಾಲಯಗಳಲ್ಲಿ ವಾಸಿಸುವವರಲ್ಲ. ಅಧ್ಯಾಯವನ್ನು ನೋಡಿ |