ಅಪೊಸ್ತಲರ ಕೃತ್ಯಗಳು 17:5 - ದೆವಾಚಿ ಖರಿ ಖಬರ್5 ಖರೆ ಜುದೆವಾಂಚ್ಯಾ ಲೊಕಾಕ್ನಿ ಹೆ ಬಗುನ್ ಕುಸ್ಡೆಪಾನ್ ಹೊಲೆ, ತೆನಿ ಶಾರಾತ್ಲ್ಯಾ ಥೊಡ್ಯಾ ಪಿಧುಡ್ಯಾ ಲೊಕಾಕ್ನಿ ಪೈಸೆ ದಿವ್ನ್ ಬಲ್ವುನ್ ಹಾನುನ್ ಥೈ ಧಾಂದಲ್ ಉಟ್ವುಲ್ಯಾನಿ, ತಿ ಲೊಕಾ ಪಾವ್ಲುಕ್ ಅನಿ ಸಿಲಾಸಾಕ್ ಹುಕ್ಡುನ್ಗೆತ್ ಯೊಸೊನಾಚ್ಯಾ ಘರಾಕ್ ಜಾವ್ನ್ ತೆಂಕಾ ವಡುನ್ ಲೊಕಾಂಚ್ಯಾ ಫಿಡ್ಯಾತ್ ಹಾನುಚೆ ಮನುನ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು. ಅಧ್ಯಾಯವನ್ನು ನೋಡಿ |