ಅಪೊಸ್ತಲರ ಕೃತ್ಯಗಳು 18:2 - ದೆವಾಚಿ ಖರಿ ಖಬರ್2 ಪೊಂತ್ ಮನ್ತಲ್ಯಾ ಗಾಂವಾತ್ ಉಪಾಜಲ್ಲೊ ಅಕ್ವಿಲ್ ಮನ್ತಲ್ಯಾ ನಾವಾಚೊ ಥೈ ದಿಸಲ್ಲೊ, ಸಗ್ಳಿ ಜುದೆವಾಂಚಿ ಲೊಕಾ ರೊಮ್ ಶಾರಾಕ್ ಸೊಡುನ್ ಜಾವ್ಚೆ ಮನುನ್ ಹುಕುಮ್ ದಿಲ್ಯಾನ್, ಅಕ್ವಿಲ್ ಅನಿ ತೆಚಿ ಬಾಯ್ಕೊ ಪ್ರಿಸ್ಕಿಲ್ಲ್ ಮನ್ತಲ್ಲಿ ತೆನಿ ಇಟಲಿಕ್ನಾ ಕೊರಿಂಥಾಕ್ ಅತ್ತಾ ದನಿ ಯೆಲ್ಲ್ಯಾನಿ, ಕ್ಲಾಡಿಯಸ್ ಮನ್ತಲ್ಯಾ ಮಾನಸ್ಸಾನ್ ಹುಕುಮ್ ದಿಲ್ಯಾನ್, ತೆನಿ ಇಟಲಿ ಮನ್ತಲೆ ಗಾಂವ್ ಸೊಡುನ್ ಯೆಲ್ಲ್ಯಾನಿ, ಪಾವ್ಲುನ್ ಅಕ್ವಿಲಾಕ್ ಅನಿ ತೆಜಾ ಬಾಯ್ಕೊ ಪ್ರಿಸ್ಕಿಲ್ಲಾಕ್ ಭೆಟುಕ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು. ಅಧ್ಯಾಯವನ್ನು ನೋಡಿ |