ಅಪೊಸ್ತಲರ ಕೃತ್ಯಗಳು 20:37 - ದೆವಾಚಿ ಖರಿ ಖಬರ್37 ಮಾನಾ ತೆನಿ ಸಗ್ಳ್ಯಾನಿ ರಡ್ಲ್ಯಾನಿ, ಅನಿ ಪಾವ್ಲುಕ್ ಯಾಂಗ್ ಮಾರುನ್, ಉಪ್ಪಾ ದಿವ್ನ್ ಜಾವ್ನ್ ಯೆ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37-38 ನೀವು ಇನ್ನು ಮೇಲೆ ನನ್ನ ಮುಖವನ್ನು ಕಾಣುವದಿಲ್ಲವೆಂದು ಪೌಲನು ಹೇಳಿದ ಮಾತಿಗೆ ಅವರು ವಿಶೇಷವಾಗಿ ವ್ಯಥೆಪಟ್ಟು ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ಆಮೇಲೆ ಅವರು ಅವನನ್ನು ಹಡಗಿಗೆ ಸಾಗಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37-38 ಅವರೆಲ್ಲರೂ ಬಹಳವಾಗಿ ಅತ್ತರು. “ನೀವು ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲ”ವೆಂದು ಪೌಲನು ಹೇಳಿದ್ದರಿಂದ ಅವರು ಬಹಳ ದುಃಖಗೊಂಡಿದ್ದರು. ಅವರು ಪೌಲನನ್ನು ಅಪ್ಪಿಕೊಂಡು ಮುದ್ದಿಟ್ಟರು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು. ಅಧ್ಯಾಯವನ್ನು ನೋಡಿ |