ಅಪೊಸ್ತಲರ ಕೃತ್ಯಗಳು 21:24 - ದೆವಾಚಿ ಖರಿ ಖಬರ್24 ತಿಯಾ ತೆಂಕಾ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ತುಕಾಬಿ ನಿತಳ್ ಕರುನ್ಗೆತ್ ತೆಂಚೆ ಹರಕೆ ಪಾವ್ಸು, ಅಶೆ ಕರ್‍ತಾನಾ ತುಜ್ಯಾ ವಿಶಯಾತ್ ತೆನಿ ಆಯ್ಕಲಿ ಖಬ್ರಿಯಾ ಖರೆ ನ್ಹಯ್ ಮನುನ್, ಅನಿ ತಿಯಾ ಮೊಯ್ಜೆಚ್ಯಾ ಖಾಯ್ದ್ಯಾಚ್ಯಾ ಸಾರ್ಕೆ ಚಲ್ತೈಯ್ ಮನುನ್ ಕಳ್ವುನ್ ಘೆತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀನು ಅವರನ್ನು ಕರೆದುಕೊಂಡು ಹೋಗಿ ಅವರ ಜೊತೆಯಲ್ಲಿ ನೀನೂ ಶುದ್ಧಾಚಾರವಿಧಿಯನ್ನು ಮಾಡಿಸಿಕೊ. ಅವರ ಖರ್ಚುವೆಚ್ಚವನ್ನೆಲ್ಲಾ ನೀನೇ ವಹಿಸಿಕೋ. ಅವರು ಮುಂಡನ ಮಾಡಿಸಿಕೊಳ್ಳಲಿ. ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿಸಿಕೊಂಡಿರುವ ವಿಷಯ ನಿಜವಲ್ಲವೆಂದೂ ನೀನು ಕೂಡ ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯುತ್ತಿರುವೆ ಎಂದೂ ಅವರೆಲ್ಲರಿಗೂ ಮನವರಿಕೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀನು ಅವರನ್ನು ಕರೆದುಕೊಂಡು ಹೋಗಿ ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ವ್ರತವನ್ನು ತೀರಿಸಿಕೊಳ್ಳುವದಕ್ಕಾಗಿ ಅವರಿಗೋಸ್ಕರ ಹಣ ವೆಚ್ಚಮಾಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ ನೀನಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ ಎಂತಲೂ ತಿಳುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೀನು ಅವರನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಶುದ್ಧಾಚಾರದ ಸಂಪ್ರದಾಯದಲ್ಲಿ ಭಾಗವಹಿಸು. ಅವರ ಖರ್ಚುವೆಚ್ಚನ್ನೆಲ್ಲ ಕೊಡು. ಬಳಿಕ ಅವರು ತಮ್ಮ ತಲೆಬೋಳಿಸಿಕೊಳ್ಳಲಿ. ನೀನು ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿದ ಸಂಗತಿಗಳು ಸತ್ಯವಲ್ಲವೆಂದು ಅವರೆಲ್ಲರಿಗೂ ಮನದಟ್ಟಾಗುವುದು. ಸ್ವತಃ ನೀನೇ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗುತ್ತಿರುವುದನ್ನು ಅವರೆಲ್ಲರೂ ಕಣ್ಣಾರೆ ಕಾಣುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು. ಅಧ್ಯಾಯವನ್ನು ನೋಡಿ |