ಅಪೊಸ್ತಲರ ಕೃತ್ಯಗಳು 22:14 - ದೆವಾಚಿ ಖರಿ ಖಬರ್14 ಅನನಿಯಾನ್ ಮಾಕಾ, ಅಮ್ಚ್ಯಾ ಪುರ್ವಜಾಂಚ್ಯಾ ದೆವಾನ್ ತುಕಾ ಲೈ ಯೆಳಾಚ್ಯಾ ಅದ್ದಿಚ್ ಎಚುನ್ ಘೆಟ್ಲಾ, ದೆವಾಚಿ ಯವ್ಜನ್ ಕಳ್ವುನ್ ಘೆವ್ಚೆ ಮನುನ್ ನಿಯತ್ತಿಚ್ಯಾ ಜೆಜುಕ್ ಬಗುಚೆ ಮನುನ್ ಅನಿ ತೆಚಿ ಸಗ್ಳಿ ಗೊಸ್ಟ್ ಆಯ್ಕುಚೆ ಮನುನ್ ದೆವಾನ್ ತುಕಾ ಎಚುನ್ ಘೆಟ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಅವನು, ‘ನಮ್ಮ ಪೂರ್ವಜರ ದೇವರು ತಮ್ಮ ಚಿತ್ತವನ್ನು ನೀನು ಅರಿಯಬೇಕೆಂದು, ತಮ್ಮ ಸತ್ಯಸ್ವರೂಪಿಯನ್ನು ನೀನು ನೋಡಬೇಕೆಂದು, ತಮ್ಮ ಕಂಠಸ್ವರವನ್ನು ನೀನು ಕೇಳಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಮೇಲೆ ಅವನು - ನಮ್ಮ ಪಿತೃಗಳ ದೇವರು ತನ್ನ ಚಿತ್ತವನ್ನು ನೀನು ತಿಳುಕೊಳ್ಳುವದಕ್ಕೂ ಆ ನೀತಿವಂತನನ್ನು ನೋಡುವದಕ್ಕೂ ಆತನ ಬಾಯಿಂದ ಒಂದು ಮಾತನ್ನು ಕೇಳುವದಕ್ಕೂ ನಿನ್ನನ್ನು ನೇವಿುಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ. ಅಧ್ಯಾಯವನ್ನು ನೋಡಿ |