ಅಪೊಸ್ತಲರ ಕೃತ್ಯಗಳು 25:16 - ದೆವಾಚಿ ಖರಿ ಖಬರ್16 ಖರೆ ಮಿಯಾ, ಚುಕ್ ದಾಕ್ವುಲ್ಲ್ಯಾ ಮಾನ್ಸಾಕ್ ಝಡ್ತಿ ಕರುಕ್ ಸಾಟ್ನಿ ದುಸ್ರ್ಯಾಕ್ನಿ ಒಪ್ಪಸ್ತಲೆ ರೊಮನ್ ಲೊಕಾಂಚಿ ಪದ್ದತ್ ನ್ಹಯ್, ಅದ್ದಿ ತೆನಿ ಅಪ್ನಾಚೆರ್ ಚುಕ್ ಸಾಂಗುಕ್ ಲಾಗಲ್ಯಾಕ್ನಿ ಇದ್ರಾಕ್ ಬದ್ರಾಕ್ ಭೆಟುನ್ ಅಪ್ಲಿ ಚುಕ್ ಸಾಂಗ್ತಲಿ ಹೊತ್ತಿ ಸಾಂಗುಕ್ ಅವ್ಕಾಸ್ ಕರುನ್ ದಿವ್ಚೆ ಮನುನ್ ಮಿಯಾ ಸಾಂಗ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಅವರಿಗೆ - ಪ್ರತಿವಾದಿಯು ವಾದಿಗಳಿಗೆ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷವಿಷಯದಲ್ಲಿ ಪ್ರತಿವಾದಮಾಡುವದಕ್ಕೆ ಆಸ್ಪದಕೊಡದೆ ಅವನನ್ನು ಒಪ್ಪಿಸಿಬಿಡುವದು ರೋಮಾಯರ ಪದ್ಧತಿಯಲ್ಲವೆಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು. ಅಧ್ಯಾಯವನ್ನು ನೋಡಿ |