21-22 ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.
21 ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ.