ಅಪೊಸ್ತಲರ ಕೃತ್ಯಗಳು 5:9 - ದೆವಾಚಿ ಖರಿ ಖಬರ್9 ಪೆದ್ರುನ್ ತಿಕಾ ತಿಯಾ ಅನಿ ತುಜ್ಯಾ ಘವಾನ್ ಧನಿಯಾಚ್ಯಾ ಆತ್ಮ್ಯಾಕ್ ಪರಿಕ್ಷೆ ಕರಲ್ಲೆ ಕಶ್ಯಾಕ್? ಅಬಕ್! ತುಜ್ಯಾ ಘವಾಕ್ ಮಾಟಿ ಕರುನ್ ಯೆಲ್ಲಿ ಲೊಕಾ ಧಾರಾತ್ ಇಬೆ ಹಾತ್ ತುಕಾಬಿ ತಸೆಚ್ ಉಕ್ಲುನ್ ಘೆವ್ನ್ ಜಾತಾತ್ ಮನುನ್ ಸಾಂಗ್ಲ್ಯಾಲಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಪೇತ್ರನು ಆಕೆಗೆ - ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವದಕ್ಕೆ ಯಾಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಹೂಣಿಟ್ಟವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು. ಅಧ್ಯಾಯವನ್ನು ನೋಡಿ |