ಅಪೊಸ್ತಲರ ಕೃತ್ಯಗಳು 7:10 - ದೆವಾಚಿ ಖರಿ ಖಬರ್10 ತೆಕಾ ಯೆಲ್ಲ್ಯಾ ತರಾಸಾಂತ್ನಾ ದೆವಾನ್ ಸೊಡ್ವುಲ್ಯಾನ್, ಇಜಿಪ್ತ್ ದೆಶಾತ್ ಫೆರೊಹ್ ರಾಜಾಕ್ನಾ ದಯಾ ಗಾಯ್ ಸಾರ್ಕೊ ಹೊಲೆ, ಅನಿ ತೆಕಾ ರಾಜಾನ್ ಇಜಿಪ್ತ್ ,ಅನಿ ಅಪ್ಲ್ಯಾ ಸಗ್ಳ್ಯಾ ಲೊಕಾಕ್ನಿ ಅದಿಪತಿ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು. ಅಧ್ಯಾಯವನ್ನು ನೋಡಿ |