ಇಬ್ರಿಯರಿಗೆ 11:4 - ದೆವಾಚಿ ಖರಿ ಖಬರ್4 ವಿಶ್ವಾಸಾನುಚ್ ಅಬೆಲಾನ್ ಕಾಯಿನಾಚ್ಯಾನ್ ಬಿ ಬರೊ ಬಲಿ ದೆವಾಕ್ ದಿಲ್ಯಾನ್, ತೆಚ್ಯಾ ವೈನಾ ಅಪ್ನಿ ನಿತಿವಂತ್ ಮನುನ್ ಸಾಕ್ಷಿ ಘೆಟ್ಲ್ಯಾನ್. ದೆವಾನ್ ತೆಜಿ ಕಾನಿಕ್ ಒಪ್ಪುನ್ ಘೆಟಲ್ಲೆಚ್ ತಿ ಸಾಕ್ಷಿ ತೊ ಮರುನ್ ಗೆಲ್ಯಾರ್ಬಿ ವಿಶ್ವಾಸಾನ್ ಅಜುನ್‍ಬಿ ಬೊಲುನ್ಗೆತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿ |