ಇಬ್ರಿಯರಿಗೆ 2:3 - ದೆವಾಚಿ ಖರಿ ಖಬರ್3 ತಸೆ ಹೊಲ್ಯಾರ್, ಎವ್ಡ್ಯಾ ಮೊಟ್ಯಾ ಸುಟ್ಕೆಚಿ ಪರ್ವಾ ಕರಿನಸ್ತಾನಾ ರ್‍ಹಾಲ್ಯಾರ್ ಅಮ್ಕಾ ಶಿಕ್ಷಾ ಗಾವಿನಸ್ತಾನಾ ರ್‍ಹಾಯ್ಲ್ ಕಾಯ್? ತಿ ಸುಟ್ಕಾ ಧನಿಯಾನುಚ್ ಅದ್ದಿ ಅಮ್ಕಾ ಪರ್ಗಟ್ ಕರಲ್ಲ್ಯಾನ್ ಅನಿ ಧನಿಯಾನ್ ಸಾಂಗಟಲ್ಲೆ ಆಯ್ಕಲ್ಲ್ಯಾನಿ ಮಾನಾ ಅಮ್ಕಾ ತೆಚಿ ಖಾತ್ರಿ ಕರುನ್ ದಿಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ. ಅಧ್ಯಾಯವನ್ನು ನೋಡಿ |