ಇಬ್ರಿಯರಿಗೆ 2:6 - ದೆವಾಚಿ ಖರಿ ಖಬರ್6 ಪವಿತ್ರ್ ಪುಸ್ತಕಾತ್ ಎಕಾಕ್ಡೆ ಅಶೆ ಸಾಂಗುನ್ ಹೊಲ್ಲೆ ಹಾಯ್, “ತಿಯಾ ಮಾನ್ಸಾಚಿ ಯಾದ್ ಕಾಡುಕ್ ತೊ ಕೊನ್? ತೆಜಿ ಕಾಳ್ಜಿ ಕರುಕ್ ಮಾನುಸ್ ಕೊನ್?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಬದಲಾಗಿ, ಪವಿತ್ರಗ್ರಂಥದಲ್ಲಿ ಒಂದೆಡೆ ಹೀಗೆಂದು ಸ್ಪಷ್ಟವಾಗಿ ಹೇಳಲಾಗಿದೆ: “ಓ ದೇವಾ, ಹುಲುಮಾನವನೆಷ್ಟರವನು ನೀನವನ ಗಮನಿಸಲು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಶಾಸ್ತ್ರದ ಒಂದು ಭಾಗದಲ್ಲಿ - ಮನುಷ್ಯನು ಎಷ್ಟು ಮಾತ್ರದವನು; ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು; ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ: “ದೇವರೇ, ನೀನು ಮಾನವರನ್ನು ಏಕೆ ನೆನಪುಮಾಡಿಕೊಳ್ಳಬೇಕು? ನೀನು ಮನುಷ್ಯನಿಗೋಸ್ಕರ ಏಕೆ ಚಿಂತಿಸಬೇಕು? ಅವನು ಅಷ್ಟೊಂದು ಮುಖ್ಯನಾದವನೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು? ಅಧ್ಯಾಯವನ್ನು ನೋಡಿ |