ಇಬ್ರಿಯರಿಗೆ 6:11 - ದೆವಾಚಿ ಖರಿ ಖಬರ್11 ತುಮ್ಚ್ಯಾತ್ಲೊ ಹರ್ ಎಕ್ಲೊಬಿ ತ್ಯಾಚ್ ಉಮ್ಮೆದಿನ್ ರ್‍ಹಾವ್ನ್ ತುಮ್ಚ್ಯಾ ಸಗ್ಳ್ಯಾ ಜಿವನಾತ್ ತುಮ್ಚೊ ಬರೊಸೊ ಘಟ್ ಕರುನ್ ಘೆವ್ನ್ ರ್‍ಹಾವ್ಚೆ ಮನುನ್ ಅಮಿ ಅಶ್ಯಾ ಕರ್ತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿ |