ಇಬ್ರಿಯರಿಗೆ 7:8 - ದೆವಾಚಿ ಖರಿ ಖಬರ್8 ಅಬ್ರಾಹಾಮಾಕ್ನಾ ಧಾತ್ಲೊ ಎಕ್ ಭಾಗ್ ಘೆಟಲ್ಲೊ ಮೆಲ್ಕಿಜೆದೆಕ್ ಝಿತ್ತೊಚ್ ರ್‍ಹಾತಾ ಮನ್ತಲ್ಯಾಕ್ ಸಾಕ್ಷಿ ದಿಲ್ಲಿ ಹಾಯ್ , ಖರೆ ಹಿ ಯಾಜಕಾ ಧಾತ್ಲೊ ಎಕ್ ವಾಟೊ ಘೆತಾತ್ ಅನಿ ಉಲ್ಲೆಚ್ ದಿಸ್ ಜಿವಾನ್ ರ್‍ಹಾವ್ನ್ ಮಾನಾ ಲಗ್ಗುನಾಚ್ ಮರುನ್ ಜಾತಾತ್ ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ, ದಶಮಾಂಶವನ್ನು ಪಡೆಯುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು; ಅದನ್ನು ಪಡೆದ ಮೆಲ್ಕಿಸದೇಕನು ತಾನು ಅಮರ್ತ್ಯ ಯಾಜಕನೆಂದು ಸಾಕ್ಷ್ಯಾಧಾರ ಪಡೆದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಲೇವಿಯರ ಕ್ರಮವನ್ನು ನೋಡಿದರೆ ಸಾಯತಕ್ಕ ಮನುಷ್ಯರು ದಶಮಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಮೆಲ್ಕಿಜೆದೇಕನ ಕ್ರಮವನ್ನು ನೋಡಿದರೆ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವವನು ತಕ್ಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಲ್ಲಿ ದಶಮಭಾಗಗಳನ್ನು ತೆಗೆದುಕೊಳ್ಳುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು. ಆದರೆ ಅಲ್ಲಿ ತೆಗೆದುಕೊಳ್ಳುವ ಮೆಲ್ಕಿಜೆದೇಕನು ಜೀವಿಸುತ್ತಿದ್ದಾನೆಂದು ಸಾಕ್ಷಿ ಹೊಂದಿರುವವನು. ಅಧ್ಯಾಯವನ್ನು ನೋಡಿ |