ಇಬ್ರಿಯರಿಗೆ 8:6 - ದೆವಾಚಿ ಖರಿ ಖಬರ್6 ಹೊಲ್ಯಾರ್ ಅತ್ತಾ ಜೆಜು ಕ್ರಿಸ್ತಾಕ್ ದಿಲ್ಲೆ ಕಾಮ್ ತ್ಯಾ ಯಾಜಕಾಕ್ನಿ ದಿಲ್ಲ್ಯಾ ಕಾಮಾನ್‍ಬಿ ಲೈ ಕಿಮ್ತಿಚೆ ಹಾಯ್, ತಸೆಚ್ ಜೆಜುನ್ ಅಪ್ಲ್ಯಾ ಲೊಕಾಕ್ನಿ ದೆವಾಕ್ನಾ ಹಾನಲೊ ನ್ಹವೊ ಕರಾರ್ ಜುನ್ನಾಚ್ಯಾನ್ಬಿ ಕಿಮ್ತಿಚೊ, ಬರ್‍ಯಾ ಸಂಗ್ತಿಯಾಂಚ್ಯಾ ಗೊಸ್ಟಿಯಾ ವೈನಿ ನ್ಹವೊ ಕರಾರ್ ತಯಾರ್ ಹೊಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಯೇಸು ಅದಕ್ಕಿಂತ ಶ್ರೇಷ್ಠವಾದ ಯಾಜಕೋದ್ಯೋಗವನ್ನು ಹೊಂದಿದವನಾಗಿದ್ದಾನೆ; ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ. ಅಧ್ಯಾಯವನ್ನು ನೋಡಿ |