5 ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ.
5 ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.