ಎಫೆಸದವರಿಗೆ 6:8 - ದೆವಾಚಿ ಖರಿ ಖಬರ್8 ಕಶ್ಯಾಕ್ ಮಟ್ಲ್ಯಾರ್, ಗುಲಾಮಾಕ್ನಿ ಹೊಂವ್ದಿತ್, ಯಜಮಾನಾಕ್ನಿ ಹೊಂವ್ದಿತ್, ಧನಿ ತೆನಿ ಕರಲ್ಲ್ಯಾ ಬರ್‍ಯಾ ಕಾಮಾಕ್ನಿ ಪ್ರತಿ ಫಳ್ ದಿತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದಾಸ್ಯದಲ್ಲಿರುವವನಾಗಲಿ, ಸ್ವತಂತ್ರವುಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾಕಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ. ಅಧ್ಯಾಯವನ್ನು ನೋಡಿ |