ಕೊಲೊಸ್ಸೆಯವರಿಗೆ 2:7 - ದೆವಾಚಿ ಖರಿ ಖಬರ್7 ಕ್ರಿಸ್ತಾತ್ ತುಮಿ ಖೊಲಾತ್ ಮುಳಾ ಸೊಡುನ್, ತೆಚ್ಯಾ ಭುತ್ತುರ್ ತುಮ್ಚೆ ಜಿವನ್ ಭಾಂದುನ್ ಘೆವಾ. ಅನಿ ತುಮ್ಕಾ ಸಾಂಗಲ್ಲ್ಯಾ ಶಿಕಾಪಾಚ್ಯಾ ಸಾರ್ಕೆ ಕ್ರಿಸ್ತಾಚ್ಯಾ ವಿಶ್ವಾಸಾತ್ ಘಟ್ಟ್ ರ್‍ಹಾವ್ನ್ ದೆವಾಕ್ ಲೈ ಧನ್ಯಾವಾದ್ ದಿತಲೆ ಹೊವ್ನ್ ರ್‍ಹಾವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ. ಅಧ್ಯಾಯವನ್ನು ನೋಡಿ |