ಕೊಲೊಸ್ಸೆಯವರಿಗೆ 4:12 - ದೆವಾಚಿ ಖರಿ ಖಬರ್12 ಎಪಾಪ್ರಾಸಾನ್ಬಿ ತುಮ್ಕಾ ನಮಸ್ಕಾರ್ ಸಾಂಗ್ಲಾ. ತೊ ಜೆಜು ಕ್ರಿಸ್ತಾಚೊ ಸೆವಕ್ ತೊ ತುಮ್ಚ್ಯಾತ್ಲೊಚ್ ಎಕ್ಲೊ. ತುಮಿ ವಿಶ್ವಾಸಾಚ್ಯಾ ವಾಡಾವಳಿತ್ ಅನಿ ಕ್ರಿಸ್ತಾಚ್ಯಾ ಇಚ್ಚೆತ್ ತುಮಿ ಘಟ್ ರ್‍ಹಾವ್ಚೆ ಮನುನ್ ಕನ್ನಾಬಿ ಮಾಗ್ನಿತ್ನಿ ಹೊರಾಟ್ ಕರಿತ್ ಹಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ. ಅಧ್ಯಾಯವನ್ನು ನೋಡಿ |