4 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
4 ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.
4 ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
4 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.