ಗಲಾತ್ಯದವರಿಗೆ 4:23 - ದೆವಾಚಿ ಖರಿ ಖಬರ್23 ಗುಲಾಮ್ ಬಾಯ್ಕೊಮನ್ಸಿಕ್ ಜಲ್ಮಲ್ಲೊ ಲೆಕ್ ಸ್ವಾಭಾವಿಕ್ ರಿತಿನ್ ಜಲಮ್ಲೊ, ಖರೆ ತೆಚೊ ಸ್ವತಂತ್ರ್ ಬಾಯ್ಕೊಮನ್ಸಿಕ್ನಾ ಜಲಮಲ್ಲೊ ಲೆಕ್ ದೆವಾನ್ ದಿಲ್ಲ್ಯಾ ಗೊಸ್ಟಿಚೊ ಪ್ರತಿಫಳ್ ಹೊಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತೊತ್ತಿನ ಮಗನು ಸ್ವಾಭಾವಿಕವಾಗಿ ಹುಟ್ಟಿದನು. ಧರ್ಮಪತ್ನಿಯ ಮಗನೋ ವಾಗ್ದಾನದ ಫಲವಾಗಿ ಹುಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೋ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದಾಸಿಯ ಮಗನು ಶಾರೀರಿಕವಾಗಿ ಹುಟ್ಟಿದವನು. ಆದರೆ ಧರ್ಮಪತ್ನಿಯ ಮಗನಾದರೋ ದೇವರ ವಾಗ್ದಾನದ ಮೂಲಕ ಹುಟ್ಟಿದನು. ಅಧ್ಯಾಯವನ್ನು ನೋಡಿ |