ತೀತನಿಗೆ 1:5 - ದೆವಾಚಿ ಖರಿ ಖಬರ್5 ಮಿಯಾ ತುಕಾ ಕ್ರೆತಾತ್ ಕಶ್ಯಾಕ್ ಸೊಡುನ್ ಯೆಲೊ, ಮಟ್ಲ್ಯಾರ್, ಅಜುನ್ ಥೈ ಸಮಾ ಕರ್‍ತಲಿ ಕಾಮಾ ಹಾತ್, ತಿ ಪುರಾ ಕರುಕ್ ಅನಿ ಹರ್ ಗಾಂವಾಂಚ್ಯಾ ತಾಂಡ್ಯಾಚ್ಯಾ ವಡ್ಲಾಕ್ನಿ ನೆಮ್ಸುನ್ ಕಾಡುಕ್ ಮಿಯಾ ತುಕಾ ಸಾಂಗಲ್ಲ್ಯಾ ಗೊಸ್ಟಿಯಾ ಯಾದ್ ಥವ್ನ್ ಘೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು. ಅಧ್ಯಾಯವನ್ನು ನೋಡಿ |