ಪ್ರಕಟನೆ 10:1 - ದೆವಾಚಿ ಖರಿ ಖಬರ್1 ಮಾನಾ ಅನಿ ಎಕ್ ಮೊಟೊ ದೆವ್‍ದುತಾ ಸರ್ಗಾತ್ನಾ ಖಾಲ್ತಿ ಯೆತಲೊ ಮಿಯಾ ಬಗಟ್ಲೊ. ಎಕ್ ಮೊಡಾನ್ ತೆಕಾ ಲಪಟಲ್ಲೆ ಹೊತ್ತೆ ಅನಿ ತ್ಯೆಚ್ಯಾ ಟಕ್ಲ್ಯಾಚ್ಯಾ ಭೊತ್ಯಾನಿ ಕಾಮನ್‍ಬಿಲ್ಲ್ ಹೊತ್ತೆ; ತೆಚೆ ತೊಂಡ್ ದಿಸ್ ಸರ್ಕೆ ಹೊತ್ತೆ, ಅನಿ ತೆಚೆ ಡೊಕೆ ಆಗಿಚ್ಯಾ ಖಾಂಬ್ಯಾಂಚ್ಯಾ ಸರ್ಕೆ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು; ಅವನ ತಲೆಯ ಮೇಲೆ ಮುಗಿಲುಬಿಲ್ಲು ಇತ್ತು; ಅವನ ಮುಖವು ಸೂರ್ಯನೋಪಾದಿಯಲ್ಲಿತ್ತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು. ಅಧ್ಯಾಯವನ್ನು ನೋಡಿ |