ಪ್ರಕಟನೆ 12:14 - ದೆವಾಚಿ ಖರಿ ಖಬರ್14 ಭಯಾನಕ್ ಸಾಪಾಕ್ನಾ ಚುಕ್ವುನ್ ಘೆವ್ನ್ ಡಂಗ್ಳಿತ್ ಅಪ್ನಾಚಿ ಸಾಡೆ ತಿನ್ ವರ್ಸಾ ಕಾಳ್ಜಿ ಘೆತಲ್ಯಾ ಜಾಗ್ಯಾಕ್ ಹುಡುನ್ ಜಾವ್ಕ್ ತಿಕಾ ದೊನ್ ಗರುಡಾಚೆ ರಕೊಟೆ ದಿಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಗರುಡಪಕ್ಷಿಯ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಒಂದು ಕಾಲ, ಎರಡು ಕಾಲ, ಅರ್ಧಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಆ ಸ್ತ್ರೀಗೆ ಮಹಾಗರುಡನ ಎರಡು ರೆಕ್ಕೆಗಳನ್ನು ಕೊಡಲ್ಪಟ್ಟದ್ದರಿಂದ, ತನಗಾಗಿ ಮರುಳುಗಾಡಿನಲ್ಲಿ ಸಿದ್ಧಪಡಿಸಿದ ಸ್ಥಳಕ್ಕೆ ಹಾರಿ ಹೋಗಲು ಆಕೆಗೆ ಸಾಧ್ಯವಾಯಿತು. ಅಲ್ಲಿ ಅವಳು ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುತ್ತಾ ಸರ್ಪಕ್ಕೆ ಕಾಣದಂತೆ ಮರೆಯಾಗಿರುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು. ಅಧ್ಯಾಯವನ್ನು ನೋಡಿ |