1 ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
1 ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.
1 ನಾನು ನೋಡಲಾಗಿ ಯಜ್ಞದ ಕುರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ ಮಂದಿ ಇದ್ದರು; ಅವರವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
1 ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.
1 ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.