7 ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.
7 ಆ ದೇವದೂತನು ನನಗೆ ಹೀಗೆ ಹೇಳಿದನು : “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ.
7 ಆಗ ಆ ದೇವದೂತನು ನನಗೆ ಹೇಳಿದ್ದು - ನೀನೇಕೆ ಆಶ್ಚರ್ಯಪಟ್ಟಿ? ಆ ಸ್ತ್ರೀಯಿಂದಲೂ ಅವಳ ವಾಹನವಾಗಿದ್ದು ಏಳು ತಲೆಗಳೂ ಹತ್ತು ಕೊಂಬುಗಳೂ ಉಳ್ಳ ಮೃಗದಿಂದಲೂ ಸೂಚಿತವಾದ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.
7 ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ.
7 ಆಗ ದೂತನು ನನಗೆ: “ನೀನೇಕೆ ಆಶ್ಚರ್ಯಪಟ್ಟೆ? ನಾನು ನಿನಗೆ ಆ ಸ್ತ್ರೀಯ ವಿಷಯವಾಗಿಯೂ ಅವಳು ಹೊತ್ತುಕೊಂಡಿದ್ದ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದ ಮೃಗದ ವಿಷಯವಾಗಿಯೂ ಇರುವ ಗೂಡಾರ್ಥವನ್ನು ನಿನಗೆ ತಿಳಿಸುವೆನು.