ಪ್ರಕಟನೆ 2:5 - ದೆವಾಚಿ ಖರಿ ಖಬರ್5 ತಿಯಾ ಕವ್ಡ್ಯಾ ಫಾಟಿ ಪಡ್ಲೆ ಮನುನ್ ತಿಯಾಚ್ ಯವ್ಜುನ್ ಬಗ್! ತಿಯಾ ಪಾಪ್ ಕರ್ತಲೆ ಸೊಡುನ್ ಸೊಡ್ ಅನಿ ತಿಯಾ ಪಯ್ಲೆ ಕಸೆ ಕರಲ್ಲೆ ತಸೆಚ್ ಕರ್. ತಿಯಾ ಪಾಪ್ ಕರ್ತಲೆ ಸೊಡಿನಸ್ಲ್ಯಾರ್ ಮಿಯಾ ತುಜೆಕ್ಡೆ ಯೆತಾ ಅನಿ ತುಜೊ ದಿವ್ಯಾಚೊ ಖಾಂಬೊ ತ್ಯೆಚ್ಯಾ ಜಾಗ್ಯಾ ವೈನಾ ಕಾಡುನ್ ಘೆವ್ನ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿ |