9 ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.
9 ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.
9 ಅವನು ನನಗೆ - ಮಾಡಬೇಡ ನೋಡು; ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವವರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಎಂದು ಹೇಳಿದನು.
9 ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.
9 ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.