ಪ್ರಕಟನೆ 6:8 - ದೆವಾಚಿ ಖರಿ ಖಬರ್8 ತನ್ನಾ ಹಿರ್ವ್ಯಾ ಸರ್ಕ್ಯಾ ಬನ್ನಾಚೆ ಎಕ್ ಘೊಡ್ಕೆ ಮಾಕಾ ದಿಸ್ಲೆ. ಹೆಚ್ಯಾ ವರ್ತಿ ಸವಾರಿ ಕರ್ತಲ್ಯಾಕ್ ಮರಾನ್ ಮನುನ್ ನಾಂವ್ ದಿಲ್ಲೆ ಹೊತ್ತೆ, ಅನಿ ಪಾತಾಳ್ಬಿ ತ್ಯೆಚ್ಯಾ ಫಾಟ್ನಾಚ್ ಹೊತ್ತೆ. ಹ್ಯಾ ಜಿಮ್ನಿ ವೈಲೊ ರುಪೈತ್ಲೊ ಚಾರ್ ಆನೆ ಭಾಗ್ ಮಾರಾಮಾರಿಯಾನಿ, ಬರ್‍ಗಾಲಾನಿ, ರೊಗಾನಿ, ಅನಿ ಡಂಗ್ಳಿತ್ಲ್ಯಾ ಜನಾವರಾಂಚ್ಯಾ ಕಾರನಾನಿ ಜಿವಾನಿ ಮಾರುನ್ ಟಾಕುಕ್ ಮನುನ್ ಹೆಚ್ಯಾ ತಾಬೆತ್ ದಿಲ್ಲೊ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು. ಅಧ್ಯಾಯವನ್ನು ನೋಡಿ |