ಪ್ರಕಟನೆ 9:15 - ದೆವಾಚಿ ಖರಿ ಖಬರ್15 ತ್ಯಾ ಚಾರ್ ದೆವಾಚ್ಯಾ ದುತಾಕ್ನಿ ಸೊಡುನ್ ಹೊಲೆ; ಅಸೆ ತ್ಯಾ ದೆವಾಚ್ಯಾ ದುತಾಕ್ನಿ ಹ್ಯಾಚ್ ಎಳಾರ್ ಹೊಂವ್ದಿ, ಆಜುಚ್ ಹೊಂವ್ದಿ, ಹ್ಯಾಚ್ ಮ್ಹಯಿನ್ಯಾತ್ ಹೊಂವ್ದಿ, ಹ್ಯಾಚ್ ವರ್ಸಾತ್ ಹೊಂವ್ದಿ ಮಾನ್ಸಾನಿತ್ಲೊ ತಿನಾತ್ಲೊ ಎಕ್ ಭಾಗ್ ಜಿವಾನಿ ಮಾರುಕ್ ಮನುನ್ ತಯಾರ್ ಕರುನ್ ಥವಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವದಕ್ಕಾಗಿ ಅದೇ ವರುಷ ಅದೇ ತಿಂಗಳು ದಿನ ತಾಸಿಗೆ ಸಿದ್ಧವಾಗಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಟ್ಟರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು. ಅಧ್ಯಾಯವನ್ನು ನೋಡಿ |