ಪ್ರಕಟನೆ 9:20 - ದೆವಾಚಿ ಖರಿ ಖಬರ್20 ಹ್ಯಾ ಸಂಕಟಾನಿತ್ನಾ ಹುರಲ್ಲಿ ಲೊಕಾ, ತೆನಿ ಕಾಯ್-ಕಾಯ್ ಕರಿತ್ ತ್ಯಾತುರ್‍ನಾ ಭಾಯ್ರ್ ಪಡುಕ್ ನತ್ತಿ, ತೆನಿ ಸೈತಾನಾಚಿ ಪುಜಾ ಕರ್ತಲೆ, ನಾಹೊಲ್ಯಾರ್ ಸೊನ್ಯಾಚ್ಯಾ, ಚಾಂದಿಚ್ಯಾ, ತಾಂಬ್ಯಾಚ್ಯಾ, ಗುಂಡ್ಯಾಚ್ಯಾ, ಅನಿ ನಾಕ್ಡಾಚ್ಯಾ, ದಿಸಿನಸಲ್ಲ್ಯಾ, ಆಯ್ಕಿನಸಲ್ಲ್ಯಾ, ಚಲಿನಸಲ್ಲ್ಯಾ ಮುರ್ತಿಯಾಂಚಿ ಪುಜಾ ಕರ್ತಲೆ ಸೊಡುಕ್ ನತ್ತ್ಯಾನಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿ |