ಫಿಲಿಪ್ಪಿಯವರಿಗೆ 3:8 - ದೆವಾಚಿ ಖರಿ ಖಬರ್8 ಯೆವ್ಡೆ ನಸ್ತಾನಾ ಮಾಜೊ ಧನಿ ಕ್ರಿಸ್ತ್ ಜೆಜುಚ್ಯಾ ವಿಶಯಾತ್ಲ್ಯಾ ಲೈ ಮೊಟ್ಯಾ ಶಾನೆಪಾನಾಚ್ಯಾ ವೈನಾ ಮಿಯಾ ಸಗ್ಳೆಬಿ ಲುಕ್ಷಾನ್ ಮನುನ್ ಚಿಂತುನ್ ಘೆತಾ. ತೆಚ್ಯಾ ಸಾಟ್ನಿ ಮಿಯಾ ಸಗ್ಳೆಬಿ ಕಳ್ದುನ್ ಘೆವ್ನ್ ತೆ ಕಚ್ರೊ ಮನುನ್ ಚಿಂತುನ್ ಘೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ. ಅಧ್ಯಾಯವನ್ನು ನೋಡಿ |