10 ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
10 ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.
10 ನನ್ನ ವಿಷಯವಾದ ನಿಮ್ಮ ಯೋಚನೆಯೆಂಬ ಬಳ್ಳಿಯು ಇಷ್ಟು ದಿವಸಗಳಾದ ಮೇಲೆ ಪುನಃ ಚಿಗುರಿದ್ದಕ್ಕೆ ನಾನು ಕರ್ತನ ನಿವಿುತ್ತ ಬಹಳವಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ನಿಜವಾಗಿ ಇರುತ್ತಿದ್ದರೂ ಇದುವರೆಗೆ ಅದರ ಪ್ರಕಾರ ಮಾಡುವದಕ್ಕೆ ಸಂದರ್ಭ ಸಿಕ್ಕಲಿಲ್ಲವೇನೋ.
10 ನನ್ನ ಮೇಲೆ ನಿಮಗಿರುವ ಚಿಂತೆಯನ್ನು ನೀವು ಮತ್ತೆ ತೋರಿಸಿದ್ದಕ್ಕಾಗಿ ನಾನು ಪ್ರಭುವಿನಲ್ಲಿ ಬಹು ಸಂತೋಷಪಡುತ್ತೇನೆ. ನೀವು ನನ್ನ ಬಗ್ಗೆ ಚಿಂತಿಸುತ್ತಲೇ ಇದ್ದೀರಿ. ಆದರೆ ಅದನ್ನು ತೋರಿಸಲು ನಿಮಗೆ ಅವಕಾಶವೇ ಇರಲಿಲ್ಲ.
10 ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.