14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
14 ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ.
14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನು ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ.
14 ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
14 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.