ಮತ್ತಾಯ 10:37 - ದೆವಾಚಿ ಖರಿ ಖಬರ್37 ಜೊ ಕೊನ್ ಮಾಜೆನ್ಕಿ ಜಾಸ್ತಿ ಅಪ್ನಾಚ್ಯಾ ಬಾಯ್ಚೊ ನಾಹೊಲ್ಯಾರ್ ಬಾಬಾಚೊ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನ್ಹಯ್. ಜೊ ಕೊನ್ ಅಪ್ನಾಚ್ಯಾ ಲೆಕಾಚೊ ನಾಹೊಲ್ಯಾರ್ ಲೆಕಿಚೊ ಮಾಜೆನ್ಕಿ ಜಾಸ್ತಿ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿ |