ಮತ್ತಾಯ 11:1 - ದೆವಾಚಿ ಖರಿ ಖಬರ್1 ಹೆ ಸಗ್ಳೆ ಅಪ್ನಾಚ್ಯಾ ಬಾರಾ ಜಾನಾ ಶಿಸಾಕ್ನಿ ಸಾಂಗುನ್ ಸರಲ್ಲ್ಯಾ ಮಾನಾ, ಜೆಜು ತೊ ಜಾಗೊ ಸೊಡುನ್ ಥೈ ಹೊತ್ತ್ಯಾ ಜಗೊಳ್‍ಲ್ಯಾ ಶಾರಾತ್ನಿ ಶಿಕ್ವುಕ್ ಅನಿ ದೆವಾಚಿ ಬರಿ ಖಬರ್ ಸಾಂಗುಕ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿ |