ಮತ್ತಾಯ 11:18 - ದೆವಾಚಿ ಖರಿ ಖಬರ್18 ಕಶ್ಯಾಕ್ ಮಟ್ಲ್ಯಾರ್, ಜುವಾಂವ್ ಯೆಲೊ ಅನಿ ತೆನಿ ಉಪಾಸ್ ಕರ್‍ಲ್ಯಾನ್ ಅನಿ ವಾಯ್ನ್ ಫಿವ್ಕ್ ನಾ. ತನ್ನಾ ಸಗ್ಳ್ಯಾ ಲೊಕಾನಿ ತೆಕಾ ಗಿರೊಲಾಗ್ಲಾ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ, ‘ಇವನಿಗೆ ದೆವ್ವ ಹಿಡಿದಿದೆ’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೇಗಂದರೆ ಯೋಹಾನನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳದವನಾಗಿದ್ದನು; ಅವರು ಅವನಿಗೆ - ದೆವ್ವ ಹಿಡಿದದೆ ಅನ್ನುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು. ಅಧ್ಯಾಯವನ್ನು ನೋಡಿ |