21 ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
21 “ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.