ಮತ್ತಾಯ 13:49 - ದೆವಾಚಿ ಖರಿ ಖಬರ್49 ಜಗಾಚ್ಯಾ ಅಕ್ರಿಚ್ಯಾ ಕಾಲಾತ್ ಅಸೆಚ್ ಹೊತಾ. ದೆವಾಚಿ ದುತಾ ಯೆವ್ನ್ ಬರ್‍ಯಾ ಲೊಕಾಂಚ್ಯಾ ಮದ್ದಿ ಹೊತ್ತ್ಯಾ, ಬುರ್ಶ್ಯಾ ಲೊಕಾಕ್ನಿ ಎಚುನ್ ಕಾಡ್ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವದು. ದೇವದೂತರು ಹೊರಟುಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆಮಾಡಿ ಅವರನ್ನು ಬೆಂಕೀಕೊಂಡದಲ್ಲಿ ಹಾಕುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಈ ಪ್ರಪಂಚದ ಅಂತ್ಯದಲ್ಲಿ ಅದೇ ರೀತಿ ಆಗುವುದು. ದೇವದೂತರು ಬಂದು ಒಳ್ಳೆಯ ಜನರಿಂದ ಕೆಟ್ಟಜನರನ್ನು ಬೇರೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ, ಅಧ್ಯಾಯವನ್ನು ನೋಡಿ |