ಮತ್ತಾಯ 17:24 - ದೆವಾಚಿ ಖರಿ ಖಬರ್24 ಜೆಜು ಅನಿ ತೆಚಿ ಶಿಸಾ ಕಪರ್‍ನವ್ ಮನ್ತಲ್ಯಾ ಗಾವಾಕ್ ಯೆಲ್ಲ್ಯಾ ತನ್ನಾ, ದೆವಾಚ್ಯಾ ಗುಡಿಚಿ ತೆರ್‍ಗಿ ವಸುಲ್ ಕರ್‍ತಲೆ ಪೆದ್ರುಕ್ಡೆ ಯೆಲೆ. ಅನಿ, ಗುರುಜಿ. ದೆವಾಚ್ಯಾ ಗುಡಿಚಿ ತೆರ್‍ಗಿ ಭರಿನಾ ಮನಿ ಕಾಯ್ ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೇಸು ಮತ್ತು ಶಿಷ್ಯರು ಕಫೆರ್ನವುಮಿಗೆ ಹೋದರು. ದೇವಾಲಯದ ತೆರಿಗೆಯನ್ನು ವಸೂಲಿಮಾಡುತ್ತಿದ್ದವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರು ತೆರಿಗೆ ಕಟ್ಟುವುದಿಲ್ಲವೇ?” ಎಂದು ವಿಚಾರಿಸಿದರು. ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದು ಉತ್ತರವಿತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ಕಪೆರ್ನೌವಿುಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಎತ್ತುವವರು ಪೇತ್ರನ ಬಳಿಗೆ ಬಂದು - ನಿಮ್ಮ ಬೋಧಕನು ದೇವಾಲಯದ ತೆರಿಗೆಯನ್ನು ಸಲ್ಲಿಸುವದಿಲ್ಲವೇ ಎಂದು ಕೇಳಲು - ಹೌದು, ಸಲ್ಲಿಸುವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |