ಮತ್ತಾಯ 18:12 - ದೆವಾಚಿ ಖರಿ ಖಬರ್12 ಎಕ್ ಸೆಂಬರ್ ಬಕ್ರಿ ಹೊತ್ತೊ ಮಾನುಸ್, ತ್ಯಾತುರ್‍ಲೆ ಎಕ್ ಬಕ್ರೆ ಕಳ್ದುನ್ ಗೆಲ್ಲ್ಯಾ ತನ್ನಾ, ತೊ ಕಾಯ್ ಕರ್‍ತಾ ಮನುನ್ ತುಮಿ ಮನ್ತ್ಯಾಶಿ? ಹುರಲ್ಲ್ಯಾ ನ್ಹವದಾರ್ ನ್ಹವ್ ಬಕ್ರ್ಯಾಕ್ನಿ ತೊ, ಚರ್‍ತಲ್ಯಾಕ್ಡೆ ಥೈಚ್ ಸೊಡ್ತಾ, ಅನಿ ಕಳ್ದುನ್ ಗೆಲ್ಲ್ಯಾ ಎಕ್ ಬಕ್ರ್ಯಾಕ್ ಹುಡ್ಕುಕ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡರೆ ಅವನು ತೊಂಭತ್ತೊಂಭತ್ತು ಕುರಿಗಳನ್ನು ಬಿಟ್ಟು ಬೆಟ್ಟಕ್ಕೆ ಹೋಗಿ ತಪ್ಪಿಸಿಕೊಂಡದ್ದನ್ನು ಹುಡುಕುತ್ತಾನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ? ಅಧ್ಯಾಯವನ್ನು ನೋಡಿ |