ಮತ್ತಾಯ 2:22 - ದೆವಾಚಿ ಖರಿ ಖಬರ್22 ಖರೆ ಹೆರೊದಾಚ್ಯಾ ಜಾಗ್ಯಾರ್ ತೆಚೊ ಲೆಕ್ ಅರ್‍ಖೆಲಾವ್ ಜುದೆಯಾಚೊ ರಾಜಾ ಹೊಲಾ ಮನುನ್ ಆಯ್ಕುನ್ ಜುಜೆ ಬೆತ್ಲೆಹೆಮಾಕ್ ಜಾವ್ಕ್ ಭಿಂಯಾಲೊ, ಅನಿ ಸಪ್ನಾತ್ ತೆಕಾ ಸಾಂಗಲ್ಲ್ಯಾ ಸರ್ಕೆ ಗಾಲಿಲಿಯಾ ಪ್ರಾಂತ್ಯಾಕ್ ತೊ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಜುದೇಯದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಆ ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು. ಅಧ್ಯಾಯವನ್ನು ನೋಡಿ |