ಮತ್ತಾಯ 20:21 - ದೆವಾಚಿ ಖರಿ ಖಬರ್21 ತನ್ನಾ ಜೆಜುನ್ ತಿಕಾ “ಕಾಯ್ ತೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ಜೆಜುಕ್,“ತಿಯಾ ರಾಜಾ ಹೊಲ್ಲ್ಯಾ ತನ್ನಾ ಹ್ಯಾ ಮಾಜ್ಯಾ ದೊನಿಬಿ ಲೆಕಾಕ್ನಿ ಎಕ್ಲ್ಯಾಕ್ ತುಜ್ಯಾ ಉಜ್ವ್ಯಾ ಬಾಜುಕ್ ಅನಿ ಎಕ್ಲ್ಯಾಕ್ ಡಾವ್ಯಾ ಬಾಜುಕ್ ಬಸ್ವುತಾ ಮನುನ್ ಮಾಕಾ ಗೊಸ್ಟ್ ದಿ.” ಮಟ್ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನು ಆಕೆಯನ್ನು - ನಿನಗೇನು ಬೇಕಮ್ಮಾ ಎಂದು ಕೇಳಲು ಆಕೆ - ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವದಕ್ಕೆ ಅಪ್ಪಣೆಯಾಗಬೇಕು ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸು, “ನಿನ್ನ ಕೋರಿಕೆ ಏನು?” ಎಂದನು. ಅವಳು, “ನಿನ್ನ ರಾಜ್ಯದಲ್ಲಿ, ನನ್ನ ಗಂಡುಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ವಾಗ್ದಾನಮಾಡು” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೇಸು, “ನಿನ್ನ ಬೇಡಿಕೆ ಏನು?” ಎಂದು ಕೇಳಿದರು. “ನಿಮ್ಮ ರಾಜ್ಯದಲ್ಲಿ ಈ ನನ್ನ ಇಬ್ಬರು ಪುತ್ರರಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹಿಸಬೇಕು,” ಎಂದು ಬೇಡಿಕೊಂಡಳು. ಅಧ್ಯಾಯವನ್ನು ನೋಡಿ |